ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಹೊಸ ಸಾರಥಿಯ ಹುಡುಕಾಟದಲ್ಲಿದೆ.
ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆಶಿಗೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು.
ಹೀಗಾಗಿ ಅವರು ಡಿಸಿಎಂ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು 2024ರ ಲೋಕಸಬಾ ಚುನಾವಣೆಯವರೆಗೂ ಮುಂದುವರೆಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು.
ಲೋಕಸಭಾ ಚುನಾವಣೆಯ ನಂತರವು ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಕಂಡಿತ್ತು.
ಈ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಎನ್ನಲಾಗಿದ್ದು, ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿದರೆ ಆ ಜಾಗಕ್ಕೆ ಬರುವವರು ಯಾರು ಎಂಬ ಪ್ರಶ್ನೆ ಮೂಡಿದೆ.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಹಲವು ಹೆಸರುಗಳು ಕೇಳಿ ಬರುತ್ತಿದ್ದು, ಹೈಕಮಾಂಡ್ ಸಹ ನೂತನ ಸಾರಥಿಯ ಹೆಸರನ್ನು ಈ ತಿಂಗಳಲ್ಲೇ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಧ್ಯಕ್ಷ ಸ್ಥಾನದ ಕುರಿತು ಡಿ.ಕೆ.ಶಿವಕುಮಾರ್ ಬಣ ಹಾಗೂ ಸಿದ್ದರಾಮಯ್ಯ ಅವರ ಬಣದಲ್ಲಿ ಹಲವು ನಾಯಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಡಿಕೆಶಿ ಮಾತ್ರ ತಮ್ಮ ಸಹೋದರ ಡಿ.ಕೆ.ಸುರೇಶ್ ಅವರಿಗೆ ಅಧ್ಯಕ್ಷ ಸ್ಥಾನವನ್ನು ಕೊಡಿಸುವ ನಿಟ್ಟಿನಲ್ಲಿ ಬಿಗ್ ಪ್ಲಾನ್ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.