ರಾಜ್ಯ

ಈ ತಿಂಗಳೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಸಹೋದರನಿಗೆ ಮಣೆ ಹಾಕ್ತಾರಾ ಡಿ.ಕೆ.ಶಿವಕುಮಾರ್?‌

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಗ ಹೊಸ ಸಾರಥಿಯ ಹುಡುಕಾಟದಲ್ಲಿದೆ.

ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆಶಿಗೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು.

ಹೀಗಾಗಿ ಅವರು ಡಿಸಿಎಂ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು 2024ರ ಲೋಕಸಬಾ ಚುನಾವಣೆಯವರೆಗೂ ಮುಂದುವರೆಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ನೀಡಿತ್ತು.

ಲೋಕಸಭಾ ಚುನಾವಣೆಯ ನಂತರವು ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಕಂಡಿತ್ತು.

ಈ ಬೆನ್ನಲ್ಲೇ ಕಾಂಗ್ರೆಸ್‌ ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮುಂದಾಗಿದೆ ಎನ್ನಲಾಗಿದ್ದು, ಅಧ್ಯಕ್ಷ ಸ್ಥಾನದಿಂದ ಡಿಕೆಶಿ ಕೆಳಗಿಳಿದರೆ ಆ ಜಾಗಕ್ಕೆ ಬರುವವರು ಯಾರು ಎಂಬ ಪ್ರಶ್ನೆ ಮೂಡಿದೆ.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಾಳಯದಲ್ಲಿ ಹಲವು ಹೆಸರುಗಳು ಕೇಳಿ ಬರುತ್ತಿದ್ದು, ಹೈಕಮಾಂಡ್‌ ಸಹ ನೂತನ ಸಾರಥಿಯ ಹೆಸರನ್ನು ಈ ತಿಂಗಳಲ್ಲೇ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಧ್ಯಕ್ಷ ಸ್ಥಾನದ ಕುರಿತು ಡಿ.ಕೆ.ಶಿವಕುಮಾರ್‌ ಬಣ ಹಾಗೂ ಸಿದ್ದರಾಮಯ್ಯ ಅವರ ಬಣದಲ್ಲಿ ಹಲವು ನಾಯಕರು ಬೇಡಿಕೆ ಇಟ್ಟಿದ್ದಾರೆ. ಆದರೆ ಡಿಕೆಶಿ ಮಾತ್ರ ತಮ್ಮ ಸಹೋದರ ಡಿ.ಕೆ.ಸುರೇಶ್‌ ಅವರಿಗೆ ಅಧ್ಯಕ್ಷ ಸ್ಥಾನವನ್ನು ಕೊಡಿಸುವ ನಿಟ್ಟಿನಲ್ಲಿ ಬಿಗ್‌ ಪ್ಲಾನ್‌ ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

30 mins ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

55 mins ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

1 hour ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

11 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

13 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

14 hours ago