ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಆಗಲೇಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದರು.
ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 79 ತಪ್ಪುಗಳನ್ನು ಮಾಡಲಾಗಿದೆ. ಆದರೆ ತಜ್ಞರ ಸಮಿತಿ 3 ತಪ್ಪು ಆಗಿದೆ ಎಂದು ವರದಿ ಕೊಟ್ಟಿದೆ. ಆದರೆ 5 ಕ್ಕೆ ಗ್ರೇಸಿಂಗ್ ಮಾರ್ಕ್ಸ್ ಕೊಡಲಾಗಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಪರೀಕ್ಷೆ ಅವಾಂತರವನ್ನು ಸರಿಪಡಿಸುವ ನಿಟ್ಟಿನಲ್ಲಿ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಯುಪಿಎಸ್ಸಿ ಮಾದರಿಯಲ್ಲಿ ಪರೀಕ್ಷೆ ಮಾಡಬೇಕು. ಲೋಕಸೇವಾ ಪರೀಕ್ಷೆ ರದ್ದು ಮಾಡಬೇಕು. ಮರುಪರೀಕ್ಷೆ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಒಂದು ಪರೀಕ್ಷೆ ನಡೆಸಲು 15 ಕೋಟಿ ರೂ. ವೆಚ್ಚವಾಗುತ್ತದೆ. ಭಾಷಾಂತರದಲ್ಲಿ ತಪ್ಪು ಮಾಡಿದ ಯಾವ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ?. ಹೀಗಾಗಿ ಆಯೋಗದ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.





