ರಾಜ್ಯ

ಕೆಪಿಎಸ್‌ಸಿ ಪರೀಕ್ಷೆ ಅಕ್ರಮ; ಮರು ಪರೀಕ್ಷೆಗೆ ಆಗ್ರಹ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಆಗಲೇಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದರು.

ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 79 ತಪ್ಪುಗಳನ್ನು ಮಾಡಲಾಗಿದೆ. ಆದರೆ ತಜ್ಞರ ಸಮಿತಿ 3 ತಪ್ಪು ಆಗಿದೆ ಎಂದು ವರದಿ ಕೊಟ್ಟಿದೆ. ಆದರೆ 5 ಕ್ಕೆ ಗ್ರೇಸಿಂಗ್ ಮಾರ್ಕ್ಸ್ ಕೊಡಲಾಗಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಪರೀಕ್ಷೆ ಅವಾಂತರವನ್ನು ಸರಿಪಡಿಸುವ ನಿಟ್ಟಿನಲ್ಲಿ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಯುಪಿಎಸ್​ಸಿ ಮಾದರಿಯಲ್ಲಿ ಪರೀಕ್ಷೆ ಮಾಡಬೇಕು. ಲೋಕಸೇವಾ ಪರೀಕ್ಷೆ ರದ್ದು ಮಾಡಬೇಕು. ಮರುಪರೀಕ್ಷೆ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಒಂದು ಪರೀಕ್ಷೆ ನಡೆಸಲು 15 ಕೋಟಿ ರೂ. ವೆಚ್ಚವಾಗುತ್ತದೆ. ಭಾಷಾಂತರದಲ್ಲಿ ತಪ್ಪು ಮಾಡಿದ ಯಾವ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ?. ಹೀಗಾಗಿ ಆಯೋಗದ ಕಾರ್ಯದರ್ಶಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

31 mins ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

1 hour ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

3 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

6 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

7 hours ago