ಬೆಂಗಳೂರು: ಕೆ.ಪಿ.ಎಸ್.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.
ನೇಮಕಾತಿ ಪ್ರಕ್ರಿಯೆಗಳ ವಿಳಂಬದ ಕುರಿತು, ಕಾನೂನು ತೊಡಕುಗಳ ಕುರಿತು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಲು ಸೂಚಿಸಿದರು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ಸೂಚಿಸಲಾಯಿತು.
ಸಿಬ್ಬಂದಿ ಕೊರತೆ, ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳೊಂದಿಗೆ ದಿನಾಂಕ ಕ್ಲಾಷ್ ಆಗದಂತೆ ನೋಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ. ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನ್ಯತೆಯೂ ನೇಮಕಾತಿ ವಿಳಂಬಕ್ಕೆ ಒಂದು ಕಾರಣ ಎಂದು ಸಭೆಗೆ ವಿವರಿಸಲಾಯಿತು.
ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.
ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಲಾಯಿತು.
ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಿದರು.
ಮುಂದಿನ ವಾರ ಮತ್ತೊಮ್ಮೆ ಸಭೆ ಕರೆದು ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ. ಪಾಟೀಲ, ಈಶ್ವರ್ ಖಂಡ್ರೆ, ಕೆ. ಸುಧಾಕರ್, ಡಾ. ಎಂ.ಸಿ. ಸುಧಾಕರ್, ಎನ್.ಎಸ್. ಬೋಸರಾಜು, ರಹೀಂ ಖಾನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…
ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…