Mysore
22
overcast clouds

Social Media

ಸೋಮವಾರ, 10 ನವೆಂಬರ್ 2025
Light
Dark

ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕೆ.ಪಿ.ಎಸ್.ಸಿ ಅಧಿಸೂಚನೆ

ಬೆಂಗಳೂರು:  ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲಾವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು.

ಎನ್ ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ 60 ಕ್ಕೂ ಅಧಿಕ ಹುದ್ದೆ ಗಳು‌ ಖಾಲಿ ಇರುವುದನ್ನು ಮನಗಂಡ ಅವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ‌ ಮೂಲಕ ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಕಳಿಸಲು ಕಾರಣರಾಗಿದ್ದಾರೆ.

ಈ ನೇಮಕಾತಿಯಿಂದ. ರಾಜ್ಯ 31 ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ ಕೆ.ಪಿ ಎಸ್.ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು . ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ , ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ.

ಇದರಿಂದ‌ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.

ಸಿಎಂಗೆ ಕೃಷಿ ಸಚಿವರ ಧನ್ಯವಾದ

ಮುಖ್ಯಮಂತ್ರಿಯವರಿಗೆ ಧನ್ಯವಾದ ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ‌ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ . ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ . ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.

Tags:
error: Content is protected !!