Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್ ಸಿ) ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಸೇವೆಯಿಂದ ಅಮಾನತುಗೊಳಿಸಿ, ಆದೇಶ ಹೊರಡಿಸಿದ್ದಾರೆ.

ರಾಜ್ಯದ ಲಕ್ಷಾಂತರ ಯುವಕರಿಗೆ ಸರ್ಕಾರಿ ಉದ್ಯೋಗ ನೀಡುವ ಕೆಪಿಎಸ್ಸಿ ಮುಖ್ಯಸ್ಥರೇ ಅಧಿಕಾರ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಸಿಲುಕಿ ಸೇವೆಯಿಂದ ಅಮಾನತು ಗೊಂಡಿರುವುದು ಇತಿಹಾಸದಲ್ಲೇ ಇದು ಮೊದಲ ಪ್ರಕರಣವಾಗಿದೆ.

ಅಧಿಕಾರ ದುರುಪಯೋಗ ಮತ್ತು ಅಕ್ರಮದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಈ ಆದೇಶ ಹೊರಡಿಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಗಂಭೀರವಾಗಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯಪಾಲರು ಅಮಾನತು ಆದೇಶ ಹೊರಡಿಸಿದ್ದಾರೆ.

Tags:
error: Content is protected !!