Mysore
21
overcast clouds

Social Media

ಬುಧವಾರ, 09 ಜುಲೈ 2025
Light
Dark

ಇನ್ನು 2 ತಿಂಗಳೊಳಗೆ ಕೆಪಿಎಸ್‌ಸಿ ಮರು ಪರೀಕ್ಷೆ: ಸಿಎಂ ಸಿದ್ದರಾಮಯ್ಯ ಟ್ವೀಟ್‌

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಈಗಾಗಲೇ ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿ ಹಿಡಿದು, ಪರೀಕ್ಷಾರ್ಥಿಗಳ ಹಿತ ರಕ್ಷಿಸಲು ಬದ್ಧರಾಗಿದ್ದೇವೆ ಎಂದು ಪೋಸ್ಟ್‌ ಮಾಡಿದ್ದಾರೆ.

 

Tags:
error: Content is protected !!