ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಈಗಾಗಲೇ ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.
ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿ ಹಿಡಿದು, ಪರೀಕ್ಷಾರ್ಥಿಗಳ ಹಿತ ರಕ್ಷಿಸಲು ಬದ್ಧರಾಗಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…