Mysore
24
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ ಭಾನುವಾರ ಬಂಧಿಸಿದೆ. ಇದರೊಂದಿಗೆ ಪ್ರಕರಣದಲ್ಲಿ ಹಿರಿಯ ಅಧಿಕಾರಿಯೊಬ್ಬರು ಜೈಲು ಸೇರಿದಂತಾಗಿದೆ.

ಶನಿವಾರ ರಾತ್ರಿ ಸಿಐಡಿ ಮುಖ್ಯಸ್ಥ ರಾಘವೇಂದ್ರ ಹೆಗಡೆ ನೇತೃತ್ವದ ತನಿಖಾ ತಂಡವು ತೀವ್ರ ವಿಚಾರಣೆಯ ನಂತರ ಘ್ಯಾನೇಂದ್ರ ಕುರ್ಮಾರ್‌ಅವರನ್ನು ಬಂಧಿಸಿತ್ತು. ಭಾನುವಾರ ಇನ್ನಷ್ಟು ವಿಚಾರಣೆ ನಡೆಸಿದ ಬಳಿಕ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಬೆಂಗಳೂರಿನ ೧ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಘ್ಯಾನೇಂದ್ರ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಪಶುವೈದ್ಯಾಧಿಕಾರಿಗಳ ೪೦೦ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆಸುತ್ತಿದೆ.

Tags:
error: Content is protected !!