ರಾಜ್ಯ

ಕೆಪಿಟಿಸಿಎಲ್,ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ

– ಮೇ ತಿಂಗಳಲ್ಲಿ ಸಹನ ಶಕ್ತಿ ಪರೀಕ್ಷೆ ನಡೆಸಿದ್ದ ಕವಿಪ್ರನಿನಿ
– 491 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿದ ಕವಿಪ್ರನಿನಿ

ಬೆಂಗಳೂರು : ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್‌ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‍ನಲ್ಲಿ ಪ್ರಕಟಿಸಿದ್ದು, htpps://kptcl.karnataka.gov.in/recruitment ಜಾಲತಾಣದಲ್ಲಿ ಆಯ್ಕೆ ಪಟ್ಟಿ ಲಭ್ಯವಿದೆ.

ರಾಜ್ಯದಾದ್ಯಂತ ಕೆಪಿಟಿಸಿಎಲ್ ಉದ್ಯೋಗದ ಭರವಸೆಯಲ್ಲಿದ್ದ 2600 ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇ ತಿಂಗಳಿನಲ್ಲಿ ನಡೆದಿದ್ದ ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದಾದ ಎರಡು ತಿಂಗಳಲ್ಲೇ ನಿಗಮ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಂಧನ ಇಲಾಖೆಯು ಉದ್ಯೋಗದ ಗ್ಯಾರಂಟಿ ನೀಡಿದೆ.

ಉಳಿದಂತೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

3 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

3 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

3 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

3 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

3 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

3 hours ago