ಕೆ.ಆರ್.ಪೇಟೆ: ತಾಲ್ಲೂಕಿನ ಅಂಬಿಗರಹಳ್ಳಿಯಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ನೂತನ ಮಲೈ ಮಹದೇಶ್ವರ ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ 3 ಜ್ಯೋತಿಗಳಿಗೆ ಪೂಜಾ ಕೈಂಕರ್ಯ, ಕಾವೇರಿ ನದಿ ಪೂಜೆ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಇದೇ ವೇಳೆ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ, ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್,
ಜಿಲ್ಲಾ ಉಸ್ತುವಾರಿ ಸಚಿವರು ಕೆ.ಗೋಪಾಲಯ್ಯ,
ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡೆ ಸಚಿವರಾದ ಡಾ. ನಾರಾಯಣಗೌಡ, ಜಿಲ್ಲಾಧಿಕಾರಿ ಎಸ್. ಅಶ್ವತಿ, ಉಪ ವಿಭಾಗಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಇತರರು ಉಪಸ್ಥಿತರಿದ್ದರು