ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮೇಕೆದಾಟು ಯೋಜನೆಗೆ ಸಹಕರಿಸಿದರೆ ನೀವು ಕೇಂದ್ರ ಮಂತ್ರಿಯಾಗಿದ್ದಕ್ಕೂ ಸಾರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ರಾಜ್ಯ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ ಕುಮಾರಸ್ವಾಮಿ ಅವರು ಮೇಕೆದಾಟುಗೆ ಚಾಲನೆ ಕೊಡಿಸಿದ್ದೆ ಆದಲ್ಲಿ ಒಬ್ಬ ಕಾಂಗ್ರೆಸ್ಸಿಗನಾಗಿ ನಾನೇ ನಿಮಗೆ ಕೈಮುಗಿದು ಧನ್ಯವಾದ ಹೇಳುತ್ತೇನೆ. ನೀವು ಮೇಕೆದಾಟು ಯೋಜನೆಗೆ ಚಾಲನೆ ಕೊಡಿಸಿದರೆ ನೀವು ಕೇಂದ್ರ ಮಂತ್ರಿಯಾಗಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಇನ್ನು ಡಿಸೆಂಬರ್ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಎಚ್‌ಡಿಕೆ ಹೇಳಿಕೆಗೆ, ನೀವು ಕೇಂದ್ರದ ಮಂತ್ರಿಯಾಗಿರುವುದು ರಾಜ್ಯ ಸರ್ಕಾರ ಬೀಳಿಸುವುದಕ್ಕಾ? ಈವರೆಗೆ ಮಂತ್ರಿಯಾಗಿ ರಾಜ್ಯಕ್ಕೆ ನಿಮ್ಮ ಕೊಡುಗೆಯೇನು? ರಾಜ್ಯ ಸರ್ಕಾರ ಬೀಳಿಸಲು ಮತ್ತು ಎತ್ತಲು ರಾಜ್ಯದ ಜನರಿದ್ದಾರೆ, ನೀವು ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಸ್ವಲ್ಪ ಹೇಳಿ. ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಬೀಳಿಸುವುದಾ ನೀವು ಕೇಂದ್ರ ಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಕೊಡುವುದು ಎಂದು ಪ್ರಶ್ನಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಹೇಗಾದರೂ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಿಲು ಕುತಂತ್ರ ಮಾಡುತ್ತಿದೆ. ಕೇಂದ್ರದಿಂದ ಕರ್ನಾಟಕಕ್ಕಾಗಿರುವ ಅನ್ಯಾಯವನ್ನು ಮುಚ್ಚಿಹಾಕಲು ಈ ಎರಡು ಮೈತ್ರಿ ಪಕ್ಷಗಳು ಗಿಮಿಕ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…