ಬೆಳಗಾವಿ: ಸಿಎಂ ಸಿದ್ದರಾಮಯ್ಯರವರ ಪರವಾಗಿ ಕಂದಾಯ ಸಚಿವ ಕೃಷ ಬೈರೇಗೌಡ ಅವರು ಇಂದು ಸುವರ್ಣಸೌಧದಲ್ಲಿ 2024ನೇ ಸಾಲಿನ ಸರಕು ಮತ್ತು ಸೇವೆಗಳ ತೆರಿಗೆ ನಿಯಮಗಳಿಗೆ ಎರಡನೇ ವಿಧೇಯಕವನ್ನು ಮಂಡಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು ನಡೆದ ಅಧೀವೇಶನದಲ್ಲಿ ತೆರಿಗೆ ಪಾವತಿದಾರರು ಮತ್ತು ತೆರಿಗೆ ಅಧಿಕಾರಿಗಳ ಮಧ್ಯೆ ಇರುವ ಗೊಂದಲಗಳನ್ನು ನಿವಾರಿಸಿ, ಒನ್‌ಟೈಮ್ ಸೆಟಲ್‌ಮೆಂಟ್ ಮಾಡುವ ಮೂಲಕ 80,000 ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ರಾಜ್ಯಕ್ಕೆ ಸುಮಾರು 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ 2ನೇ ತಿದ್ದುಪಡಿ ತರುವ ಮೂಲಕ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.
ಈ ಕುರಿತು ಇಂದು(ಡಿಸೆಂಬರ್.16) ವಿಧೇಯಕ ಮಂಡಿಸಿದ ಕೃಷ್ಣ ಬೈರೇಗೌಡ ಮಾತನಾಡಿ, ತೆರಿಗೆ ಪಾವತಿದಾರರು ಮತ್ತು ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವೆ ಗೊಂದಲಕ್ಕೆ ತೆರೆ ಎಳೆಯುವ ಮೂಲಕ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕ್ಕೆ 2ನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈ ತಿದ್ದುಪಡಿಯ ಪ್ರಮುಖ ಉದ್ದೇಶವೆಂದರೆ ಎಲ್ಲೆಲಲ್ಲಿ ತೆರಿಗೆದಾರರು ಮತ್ತು ತೆರಿಗೆ ಅಧಿಕಾರಿಗಳ ಮಧ್ಯೆ ಗೊಂದಲಗಳಿರುವ ಬಗ್ಗೆ ತೆರೆ ಎಳೆದು ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದಾಗಿದೆ. ಅಲ್ಲದೇ ಹಿಂದಿನಿಂದಲೂ ಮದ್ಯ ಮಾಡಲು ಉಪಯೋಗುವ ಸ್ಪಿರಿಟ್‌ಗೆ ತೆರಿಗೆ ವಿಧಿಸುವ ಅಧಿಕಾರದ ನಡುವೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಧ್ಯೆ ತಕರಾರರು ಇದೆ. ಅದರೆ ಇದೀಗ ಸ್ಪರಿಟ್ ರಾಜ್ಯ ಸರ್ಕಾರಕ್ಕರ ಸಂಬಂಧಿಸಿದ ವಿಷಯವಾಗಿದ್ದು, ಇದರ ಮೇಲೆ ಜಿಎಸ್‌ಟಿ ತೆರಿಗೆ ವಿಧಿಸಬಾರದು ಎಂದು ಜಿಎಸ್‌ಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೀಗಾಗಿ ಸ್ಪಿರಿಟ್ ಅನ್ನು ಜಿಎಸ್‌ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.