ರಾಜ್ಯ

ಪೋಷಕರು, ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರ ಆಸ್ತಿಯಲ್ಲಿ ಪಾಲಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್‌ ಹಾಗೂ ದಾನಪತ್ರವನ್ನು ರದ್ದು ಮಾಡುವ ಅವಕಾಶ ನೀಡಲಾಗಿದೆ. ಅಂತಹವರಿಗೆ ಆಸ್ತಿಯಲ್ಲಿ ಪಾಲಿಲ್ಲ ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್.‌12) ವಿಧಾನ ಪರಿಷತ್‌ ಸದಸ್ಯರಾದ ಬಲ್ಕೀಸ್‌ ಬಾನು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ 2007 ರಲ್ಲಿ ಪೋಷಕರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ, ಅಂತೆಯೇ ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‌ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಇಲ್ಲವಾದರೆ ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಅದು ಆಗದಿದ್ದಲ್ಲಿ ಹಿರಿಯ ನಾಗರಿಕರು ಸೆಕ್ಷನ್ 9ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ತಂದೆ ಮತ್ತು ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್‌ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಹಾಗೂ ದಾನಪತ್ರವನ್ನು ರದ್ದುಗೊಳಿಸಿ ಪುನಃ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದರು.

ಇನ್ನು ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಅಂತೆಯೇ ಆ ಉಪ ವಿಭಾಗಾಧಿಕಾರಿಗಳ ಮುಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾವಿರಾರೂ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಉಪ ವಿಭಾಗಾಧಿಕಾರಿಗಳೊಂದಿಗೆ ಪ್ರತಿ ತಿಂಗಳು ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೇ ಜಿಲ್ಲಾಧಿಕಾರಿಗಳಿಗೆ ಅರ್ಜಿ ನೀಡಲು ಕೂಡ ಅರ್ಜಿದಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

9 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

9 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

9 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

10 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

10 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

16 hours ago