ರಾಜ್ಯ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕರ್ನಾಟಕ ಸರ್ಕಾರದ ಬಗ್ಗೆ ಹೇಳಿಕೆ ನೀಡುವ ಬದಲು, ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋ ಬಗ್ಗೆ ಸಂಸತ್‌ನಲ್ಲಿ ಚರ್ಚಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ತೀರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿಯ ಕೇಂದ್ರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸಂಸತ್‌ನಲ್ಲಿ ಹೇಳಿಕೆ ನೀಡಬೇಕೇ ಹೊರತು, ರಾಜ್ಯ ಸರ್ಕಾರದ ವಿರುದ್ಧ ಹೇಳಿಕೆ ನೀಡಬಾರದು. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಹೆಜ್ಜೆ ಹೆಜ್ಜೆಗೂ ಅನ್ಯಾಯವಾಗುತ್ತಿದೆ. ಈ ಬಾರಿಯ ಬಜೆಟ್‌ ಕರ್ನಾಟಕಕ್ಕೆ ಕರಾಳ ಅಧ್ಯಾಯ ಆಗಿದೆ. ರಾಜ್ಯದ ಜನತೆ ಕಷ್ಟಪಟ್ಟು ದುಡಿದು ತೆರಿಗೆ ಕಟ್ಟುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ತೆರಿಗೆ ಕಟ್ಟುವ ಜನರ ಹಣವನ್ನು ಲೂಟಿ ಮಾಡುತ್ತಿದೆ. ಹೀಗಾಗಿ ದೇವೇಗೌಡರಿಗೆ ನಮ್ಮ ರಾಜ್ಯದ ಬಗ್ಗೆ ಇವರಿಗೆ ಬದ್ಧತೆ ಇದ್ದರೆ ಕರ್ನಾಟಕಕ್ಕೆ ಮೊದಲು ಕೇಂದ್ರದಿಂದ ನ್ಯಾಯ ಕೊಡಿಸಲಿ. ಅದನ್ನ ಬಿಟ್ಟು ಅವರು ಮಾಡೋ ಅನ್ಯಾಯವನ್ನು ಮುಚ್ಚಿಹಾಕಿ ಇವರು ಕೂಡಾ ಅನ್ಯಾಯದಲ್ಲಿ ಪಾಲಾಗೋದು ಬಿಡಲಿ ಎಂದು ವಾಗ್ದಾಳಿ ನಡೆಸಿದರು.

ಚುನಾವಣೆ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಹೇಳಿದ್ದರು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಇನ್ನೂ ಅನುಮತಿಯನ್ನೇ ನೀಡಿಲ್ಲ. ಆದರೆ ಸುಪ್ರೀಂಕೋರ್ಟ್‌ ಮೇಕೆದಾಟಿಗೆ ವಿರೋಧ ಇಲ್ಲ ಎಂದು ಹೇಳಿದೆ. ಹೀಗಾಗಿ ದೇವೇಗೌಡರೇ ಆಗಲಿ ಯಾರೇ ಆಗಲಿ ಮೊದಲು ಅನುಮತಿ ಕೊಡಿಸಿ. ಚನ್ನಪಟ್ಟಣ ಎಲೆಕ್ಷನ್‌ನಲ್ಲಿ ಕೈಹಿಡಿದು ಸಹಿ ಹಾಕಿಸುತ್ತೇವೆ ಎಂದು ಭಾಷಣ ಮಾಡಿದ್ದರು, ಅದನ್ನು ಮೊದಲು ಕೊಡಿಸಲಿ ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

2 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

2 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

2 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

2 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

2 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

2 hours ago