cm siddaŗmiah
ವಿಜಯಪುರ : ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಇದನ್ನು ಓದಿ:ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ಪ್ರಶಸ್ತಿ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಗೆಜೆಟ್ ಅಧಿಸೂಚನೆಯಾದರೆ ಅಣೆಕಟ್ಟು ಎತ್ತರಿಸಲು ಅನುಕೂಲ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. . ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.
ಇದನ್ನು ಓದಿ:ಬ್ರೇಕ್ ಫೇಲ್ಯೂರ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್
ನೀರಾವರಿ ನಮ್ಮ ಆದ್ಯತಾ ವಲಯ
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ
ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು,. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ , ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…
ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…
ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…