ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ: ಜಮೀರ್ ವಿರುದ್ಧ ದೂರು ನೀಡಲು ಜೆಡಿಎಸ್ ಸಿದ್ದತೆ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ತಮ್ಮ ಬೆಂಬಲಿಗರೊಂದಿಗೆ ಕೃಷ್ಣ ನಾಯಕ್ ಜೆಡಿಎಸ್‍ಗೆ ಮರಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ದೂರ ಸರಿದಿದ್ದರು. ಈಗ ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುವುದು ಎಂದರು.





