Mysore
18
overcast clouds

Social Media

ಗುರುವಾರ, 01 ಜನವರಿ 2026
Light
Dark

ಮೈಕ್ರೋ ಫೈನಾನ್ಸ್‌ ಕಿರುಕುಳ|ಮಿತಿ ಮಿರಿ ವರ್ತಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡಿ ಮಿತಿ ಮಿರಿ ವರ್ತಿಸುವುದು ಕಂಡು ಬಂದರೆ ಅಂತಹ ಫೈನಾನ್ಸ್‌ಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್‌ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಇಂದು(ಜನವರಿ.28) ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಒಟ್ಟು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಆದರೆ ಆ ಫೈನಾನ್ಸ್‌ಗಳು ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್‌ಬಿಐ ನೀಡಿರುವ ಗೈಡ್‌ಲೈನ್ಸ್‌ಗಳನ್ನು ಉಲ್ಲಂಘಿಸಿ ಸಾಲ ನೀಡುತ್ತಿದೆ. ಅಲ್ಲದೇ ಸಾಲ ನೀಡುವ ವೇಳೆ ಸಾಲ ಪಡೆಯುವವರ ಆರ್ಥಿಕ ಸಾಮರ್ಥ್ಯವನ್ನು ಕಡೆಗಣಿಸಲಾಗುತ್ತಿರುವುದು ಇಂತಹ ಅಹಿತಕರ ಪ್ರಸಂಗಗಳಿಗೆ ಕಾರಣವಾಗುತ್ತಿವೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ, ಜಿಲ್ಲಾಧಿಕಾರಿಗಳಿಗೆ ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್‌ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ. ಅಲ್ಲದೇ ರಾಜ್ಯ ಸರ್ಕಾರ ಇಂತಹ ಫೈನಾನ್ಸ್‌ ಕಂಪೆನಿಗಳು ಅಕ್ರಮಗಳನ್ನು ಮಾಡಿದರೆ ಅದನ್ನು ಕಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ಹೀಗಾಗಿ ಇದನ್ನು ಹೀಗೆ ಬಿಟ್ಟರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಕಾರಣಕ್ಕೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದರು.

ಇನ್ನೂ ಆರ್‌ಬಿಐ ಗೈಡ್‌ ಲೈನ್ಸ್‌ ಪ್ರಕಾರ ಒಬ್ಬ ವ್ಯಕ್ತಿಗೆ 2 ಲಕ್ಷಕ್ಕಿಂತ ಅಧಿಕ ಸಾಲ ನೀಡಬಾರದು. ಆದರೆ ಅದನ್ನು ಯಾರು ಅನುಸರಿಸದೇ ಒಬ್ಬ ವ್ಯಕ್ಯಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಸಾಲ ಮರುಪಾವತಿ ಮಾಡದಿದ್ದರೆ ಮೈಕ್ರೋ ಫೈನಾನ್ಸ್‌ ಕಂಪೆನಿಗಳ ಅಸ್ತಿತ್ವಕ್ಕೂ ತೊಂದರೆಯಾಗಲಿದೆ. ಹಾಗಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್ ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ನಿಗ್ರಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

Tags:
error: Content is protected !!