ರಾಜ್ಯ

KRS ಒಂದೇ ವರ್ಷದಲ್ಲಿ 3ನೇ ಬಾರಿ ಭರ್ತಿ : ತಮಿಳುನಾಡು-ಕರ್ನಾಟಕ ನಡುವೆ ಈ ವರ್ಷ ಗಲಾಟೆ ಇಲ್ಲ

ಮಂಡ್ಯ : ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ ತಮಿಳುನಾಡಿಗೆ ವರ್ಷಕ್ಕೆ ೧೭೭.೨೫ ಟಿಎಂಸಿ ನೀರನ್ನು ಹರಿಸಬೇಕಿತ್ತು. ಜೂನ್ ನಿಂದ ಜೂನ್ ವರೆಗಿನ ಜಲ ವರ್ಷ ಪ್ರಕಾರ ಜೂನ್ ೨೦೨೫ರಿಂದ ಇಲ್ಲಿಯವರೆಗೆ ೧೩೮.೦೧೪ ಟಿಎಂಸಿ ನೀರು ಬಿಳಿಗೊಂಡ್ಲು ಜಲ ಮಾಪನ ಕೇಂದ್ರದಿಂದ ತಮಿಳುನಾಡಿಗೆ ಬಿಡಬೇಕಿತ್ತು. ಈ ವರ್ಷ ಉತ್ತಮ ಮಳೆ ಹಿನ್ನೆಲೆಯಲ್ಲಿ ೨೭೩.೪೨೬ ಟಿಎಂಸಿ ನೀರು ಹರಿದು ಹೋಗಿದ್ದು, ಹೆಚ್ಚುವರಿಯಾಗಿ, ೧೩೫.೪೧೨ ಟಿಎಂಸಿ ನೀರು ಹರಿದುಹೋಗುತ್ತಿದೆ. ಹೀಗಾಗಿ ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಸಮಸ್ಯೆ ಪ್ರಕೃತಿದತ್ತವಾಗಿ ಬಗೆಹರಿದಿದೆ ಎಂದು ಹೇಳಿದ್ದಾರೆ.

ಇನ್ನೂ ಈ ವರ್ಷ ಬೆಂಗಳೂರಿನ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಕೆಆರ್‌ಎಸ್, ಕಬಿನಿ, ಹೇಮಾವತಿ ಜಲಾಶಯಗಳು ಅಕ್ಟೋಬರ್‌ನಲ್ಲಿ ಮತ್ತೆ ಭರ್ತಿಯಾಗಿ, ೧೧೫ ಟಿಎಂಸಿ ನೀರು ಸಂಗ್ರಹವಿದೆ. ಇದರ ಜೊತೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮದ ೬,೫೭೬ ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಇದರ ಜೊತೆಗೆ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಕೆರೆಗಳು ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಬೆಂಗಳೂರಿಗೆ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದಿದ್ದಾರೆ.

ಬೆಂಗಳೂರಿಗೆ ವರ್ಷಕ್ಕೆ ೩೧ ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕಿದೆ. ಅಂದರೆ ಪ್ರತಿ ತಿಂಗಳು ಬೆಂಗಳೂರಿಗರಿಗೆ ೨.೬೦ ಟಿಎಂಸಿ ನೀರಿನ ಅವಶ್ಯವಿದೆ. ಕೆಆರ್‌ಎಸ್ ಜೊತೆಗೆ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು, ಕೆರೆಗಳು ಭರ್ತಿಯಾಗಿದ್ದು ಬೆಂಗಳೂರಿಗೆ ಈ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ; KRS ಅಣೆಕಟ್ಟೆ ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ: ಎಂ.ಲಕ್ಷ್ಮಣ್‌

ಬಿಳಿಗುಂಡ್ಲು ಜಲಮಾಪನ ಕೇಂದ್ರದಿಂದ ತಮಿಳುನಾಡಿಗೆ ಹರಿದ ನೀರು ಕೆಆರ್‌ಎಸ್ ಭರ್ತಿ ಹಿನ್ನೆಲೆ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಹರಿದುಹೋಗುತ್ತಿದೆ. ಬಿಳಿಗೊಂಡ್ಲು ಮಾಪನ ಕೇಂದ್ರದಿಂದ ಜೂನ್‌ನಲ್ಲಿ ೯.೧೯ ಟಿಎಂಸಿಗೆ ಬದಲಿಗೆ ೪೨.೨೫೬ ಟಿಎಂಸಿ, ಜುಲೈನಲ್ಲಿ ೩೧.೨೪ ಟಿಎಂಸಿ ಬದಲಿಗೆ ೧೦೩.೫೧೪ ಟಿಎಂಸಿ, ಆಗಸ್ಟ್‌ನಲ್ಲಿ ೪೫.೯೫ ಟಿಎಂಸಿ ಬದಲಿಗೆ ೫೧.೯೪೩ ಟಿಎಂಸಿ, ಸೆಪ್ಟೆಂಬರ್‌ನಲ್ಲಿ ೩೬.೭೬ ಟಿಎಂಸಿ ಬದಲಿಗೆ ೪೦.೭೯೦ ಟಿಎಂಸಿ, ಅಕ್ಟೋಬರ್ ನಲ್ಲಿ ೧೪.೩೫ ಟಿಎಂಸಿ ಬದಲಿಗೆ ೩೧.೩೪೪ ಟಿಎಂಸಿಯಂತೆ ಈ ವರ್ಷ ತಮಿಳುನಾಡಿಗೆ ಇದುವರೆಗೆ ೧೩೮.೦೧೪ ಟಿಎಂಸಿ ನೀರಿನ ಬದಲಿಗೆ ೨೭೩.೪೨೬ ಟಿಎಂಸಿ ನೀರು ಹರಿದುಹೋಗಿದೆ.

ಅಕ್ಟೋಬರ್ ಮೂರನೇ ವಾರ ಕೆಆರ್ ಎಸ್ ನಲ್ಲಿ ಗರಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದ್ದು, ಹೊರಹರಿವಿನ ಪ್ರಮಾಣವನ್ನು ಕೂಡ ಹೆಚ್ಚಿಸಲಾಗಿದೆ. ಕೆಆರ್‌ಎಸ್ ನಿಂದ ಹೊರಹರಿವು ೨೦,೫೪೦ ಕ್ಯೂಸೆಕ್ಸ್ ಇದೆ. ಬಿಳಿಗೊಂಡ್ಲು ಮಾಪನ ಕೇಂದ್ರದಲ್ಲಿ ಹೊರಹರಿವು ೪೧,೪೨೪ ಕ್ಯೂಸೆಕ್ಸ್ ನಷ್ಟಿದೆ ಎಂದು ತಿಳಿಸಿದ್ದಾರೆ.

೯೩ ವರ್ಷಗಳ ಬಳಿಕ ಮೂರನೇ ಬಾರಿ ಕೆಆರ್‌ಎಸ್ ಭರ್ತಿ:

೨೦೨೪ರಲ್ಲಿ ಕಾಡಿದ ಬರ ೨೦೨೫ರಲ್ಲಿ ಕಣ್ಮರೆಯಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ ೯೩ ವರ್ಷದ ಬಳಿಕ ಕೆಆರ್‌ಎಸ್ ಜೂನ್ ನಲ್ಲೇ ಭರ್ತಿಯಾಗಿ ಇತಿಹಾಸ ಸೃಷ್ಟಿಸಿತು. ನಂತರ ಅಕ್ಟೋಬರ್ ಎರಡನೇ ವಾರದಲ್ಲಿ ಜಲಾಶಯ ಎರಡನೇ ಬಾರಿ ಭರ್ತಿಯಾಗಿತ್ತು. ಅ.೧೮ರಿಂದ ೨೩ರವರೆಗೆ ಅಣೆಕಟ್ಟೆಯ ಗರಿಷ್ಠ ಸಾಮರ್ಥ್ಯ ೧೨೪.೮೦ ಅಡಿಗಳಷ್ಟು ನೀರು ಸಂಗ್ರಹ ಕಾಯ್ದುಕೊಳ್ಳುವ ಮೂಲಕ ವರ್ಷದಲ್ಲಿ ಮೂರನೇ ಬಾರಿ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ. ೯೩ ವರ್ಷದಲ್ಲಿ ೧೬ ಬಾರಿ ಮಾತ್ರ ಕೆಆರ್‌ಎಸ್ ಭರ್ತಿಯಾಗಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆ-ಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

8 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

8 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

9 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

12 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

12 hours ago