ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರನ್ನು ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದ್ದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಸಚಿವ ಮಧು ಬಂಗಾರಪ್ಪ ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಡಮ್ಮಿ ಅಭ್ಯರ್ಥಿ ಎಂಬುದು ಗೀತಾ ಶಿವಕುಮಾರ್‌ಗೆ ಅನ್ವಯವಾಗಲ್ಲ. ಗೀತಾರನ್ನ ಡಮ್ಮಿ ಅಭ್ಯರ್ಥಿ ಎಂದು ಟೀಕಿಸಿದವರೇ ಇಂದು ಡಮ್ಮಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಜನರ ಮುಂದೆ ಹೋಗುವ ಧೈರ್ಯವಿಲ್ಲ. ಅವರನ್ನ ನೋಡಿದರೇ ನನಗೆ ಅಳಬೇಕೋ, ನಗಬೇಕೋ ಗುತ್ತಾಗುತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ವ್ಯಂಗವ್ಯಾಡಿದರು.
ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನಲೇ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ.
ಈ ಮಧ್ಯೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಶ್ವರಪ್ಪಗೆ ಕರೆ ಮಾಡಿ ದೆಹಲಿಗೆ ಬರುವಂತೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಕೆ.ಎಸ್ ಈಶ್ವರಪ್ಪ ಅಮಿತ್ ಶಾ ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆ ವಾಪಸ್ ಆಗಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…