ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪ ಬಿಜೆಪಿಗೆ ಸವಾಲಾಗಿದ್ದು, ನಾಳೆ(ಏ.೧೨) ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೇ ಸರಿಯುವ ಮಾತೇ ಇಲ್ಲ ಎಂದು ನುಡಿದರು.
ಹಿಂದೂ ಕಾರ್ಯಕರ್ತರು ಹಾಗೂ ಎಲ್ಲಾ ಸಮುದಾಯದವರ ಜೊತೆ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಸಾಮಾನ್ಯ ಜನರೇ ನನಗೆ ಸ್ಟಾರ್ ಪ್ರಚಾರಕರು. ಕ್ಷೇತ್ರದಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವವಾದಿ ಈಶ್ವರಪ್ಪಗೆ ಬೆಂಬಲ ಎಂದು ಜನರು ಹೇಳುತ್ತಿದ್ದಾರೆ. ಹೆಚ್ಚಿನ ಶಕ್ತಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ಬರುತ್ತದೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ವೀಕ್. ಹೀಗಾಗಿ ರಾಘವೇಂದ್ರ ಗೆಲ್ಲಲು ಬಿಡಲ್ಲ ಎಂದರು.