ks eshwarappa
ವಿಜಯಪುರ: ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಟೀಕೆ ಮಾಡುವವರಿಗೆ ಗುಂಡು ಹೊಡೆಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಈ ಬಗ್ಗೆ ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್, ದಿನೇಶ್ ಗುಂಡೂರಾವ್‌ಗೆ ಗುಂಡು ಹೊಡೆಯಬೇಕು. ಗುಂಡು ಹಾಕಿದರೆ ಮಾತ್ರ ಎಲ್ಲಾ ಸರಿ ಹೋಗುತ್ತದೆ. ಇವರೆಲ್ಲಾ ದೇಶದ್ರೋಹಿಗಳು ಎಂದು ಕಿಡಿಕಾರಿದರು.
ಇನ್ನು ಸೀನಿಯರ್ ಖರ್ಗೆ ವಿಧಿ ಇಲ್ಲದೇ ಅಲ್ಲೊಂದು ಇಲ್ಲೊಂದು ಮಾತನಾಡುತ್ತಾರೆ. ಆದ್ರೆ ಪಾಕಿಸ್ತಾನ ಪರವಾಗಿ ಮರಿ ಖರ್ಗೆ ಇದ್ದಾರೆ. ಇವರ ಬಗ್ಗೆ ಕಾಂಗ್ರೆಸ್‌ನವರಿಂದಲೇ ಟೀಕೆ ಕೇಳಿ ಬರುತ್ತಿದೆ ಎಂದು ಕಿಡಿಕಾರಿದರು.
ಇನ್ನು ಕಾಂಗ್ರೆಸ್ ಸಾಧನಾ ಸಮಾವೇಶದ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸ್ತೆಯ ಒಂದು ಗುಂಡಿ ಕೂಡ ಮುಚ್ಚಿಲ್ಲ. ಒಂದು ಅಭಿವೃದ್ಧಿ ಕೆಲಸ ಕೂಡ ನಡೆದಿಲ್ಲ. ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…