ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ. ಅಪ್ಪ-ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಈ ಕಾರಣಕ್ಕೆ ನಾನು ಚುನಾವಣೆ ಸ್ಪರ್ಧೆ ಮಾಡಿದ್ದೆ ಎಂದು ಹೇಳಿದರು. ಅಲ್ಲದೆ ಮುಂದೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.