Mysore
22
broken clouds
Light
Dark

ಮುಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ಕೆ.ಎಸ್‌ ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಭಾರೀ ಅಕ್ರಮ ಕಂಡುಬಂದಿದೆ. ಇದರಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದು, ಇದರ ವಿಸೃತ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದರು.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗಣದಲ್ಲಿ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ. ಅವರ ಮನೆಯಲ್ಲಿದ್ದ ಹೆಣ್ಣುಮಕ್ಕಳನ್ನು ಬೀದಿಗೆ ತಂದಿದ್ದಾರೆ. ಈ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರು ನೇರವಾಗಿ ಭಾಗಿಯಾಗಿರುವುದರಿಂದ ಮುಡಾ ಅಕ್ರಮವನ್ನು ಸಿಬಿಐಗೆ ಹಸ್ತಾಂತರಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಕ್ರೋಶ ಹೊರಹಾಕಿದರು.

ಇನ್ನು ವಾಲ್ಮೀಕಿ ನಿಗಮದಲ್ಲಿನ ಅವ್ಯವಹಾರ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಈ ಸಂಬಂಧ ಸಚಿವ ಬಿ. ನಾಗೇಂದ್ರ ದದ್ದಲ್‌ ಅವರನ್ನು ಬಂಧಿಸಲೇಬೇಕು ಎಂದು ಮಾಜಿ ಸಚಿವ ಈಶ್ವರಪ್ಪ ಕಿಡಿಕಾರಿದರು.