ಬೆಂಗಳೂರು: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೆ ಸಂಬಂಧಿಸಿದಂತೆ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.
ಕಾಂತೇಶ್ ಅವರಿಗೆ ಸಂಬಂಧಿಸಿ ಅಶ್ಲೀಲ ಪೋಟೊ, ವಿಡಿಯೋ, ಸ್ಕ್ರೀನ್ ಶಾಟ್ ಅಥವಾ ಆಡಿಯೋಗಳನ್ನು ಪ್ರಸಾರ ಮತ್ತು ಪ್ರಕಟಣೆ ಮಾಡುವುದಕ್ಕೆ ನಿರ್ಭಂದ ಹೇರಿ ಕೋರ್ಟ್ ಏಪ್ರಿಲ್ 27 ರಂದು ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ವೇಳೆ ನನ್ನ ಹೆಸರಿಗೆ ಮಸಿ ಬಳಿಯುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಕಾಂತೇಶ್ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು
ದಾವೆಯಲ್ಲಿ ಪ್ರತಿವಾದಿಗಳಾಗಿರುವ ವಿವಿಧ ಮಾಧ್ಯಮಗಳಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ಈ ಸಂಬಂಧ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಲಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…