ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಹೆಚ್ಚಾಗುತ್ತಿದ್ದು, ಈ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಅಮೃತ್ ಶಿರಿಯೂರ್ ಎಂಬುವವರು ಕೈಯಲ್ಲಿ ಡೆತ್‌ನೋಟ್ ಹಿಡಿದುಕೊಂಡು ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೆಎಸ್‌ಡಿಎಲ್ ಮೆಟಿರಿಯಲ್ ವಿಭಾಗದಲ್ಲಿ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಅಮೃತ್ ಶಿರಿಯೂರ್ ಅವರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರ ಜೊತೆಗೆ ತಂದೆಗೆ ಒಳ್ಳೆಯ ಮಗ ಆಗಲಿಲ್ಲ. ಹೆಂಡತಿಗೆ ಒಳ್ಳೆಯ ಗಂಡ ಕೂಡ ಆಗಲಿಲ್ಲ ಎಂದು ಉಲ್ಲೇಖಿಸಿರುವ ಅಮೃತ್ ಸಿರಿಯೂರ್ ಅವರು, ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರದಲ್ಲಿ ಬರೆದಿದ್ದಾರೆ.
ಅಮೃತ್ ಸಿರಿಯೂರ್ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೂ ಮೊದಲೇ ಕ್ಲೀನ್…
ಮೈಸೂರು: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು…
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ‘ಕೆಆರ್‌ಎಸ್ ರಸ್ತೆಗೆ ಯಾವುದೇ ಅಧಿಕೃತ ಹೆಸರಿನ ಉಲ್ಲೇಖವಿಲ್ಲ’ ಎಂದು ಹೇಳಿದ್ದಾರೆ. ಆದರೆ ಅಧಿಕೃತವಾಗಿ…
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಅನಗತ್ಯ ಖರ್ಚುಗಳಿಂದ ಕರ್ನಾಟಕದ ಇಂದಿನ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಬಂದು ತಲುಪಿದೆ ಎಂದು ಸರ್ಕಾರದ…
ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ…
ಸಿಡ್ನಿ: ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿಯ 5ನೇ ಹಾಗೂ ಕೊನೆಯ ಪಂದ್ಯವು ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಾಳೆಯಿಂದ…