Mysore
18
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

KSET-2024: ಕೆ-ಸೆಟ್‌ ಪರೀಕ್ಷೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್)‌ 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಬಗ್ಗೆ ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದ್ದು, ನವೆಂಬರ್‌ 24 ರಂದು ಕೆ-ಸೆಟ್‌ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಅರ್ಹರು ಆನ್‌ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು http://kea.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

41 ವಿಷಯಗಳಿಗೆ ಕೆ-ಸೆಟ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ರಾಜ್ಯದ ಯಾವುದೇ ಮೂಲದ ವಿಶ್ವವಿದ್ಯಾನಿಲಯದಲ್ಲಿ ಅಥವಾ ಕಾಲೇಜಿನಲ್ಲಿ ಪಿಎಚ್‌ಡಿ ವ್ಯಾಸಂಗ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಜೊತೆಗೆ ರಾಜ್ಯ ಸರ್ಕಾರ ನಡೆಸುವ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ಕೆ-ಸೆಟ್‌ 2024ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
ಪರೀಕ್ಷೆ ದಿನಾಂಕ: ನವೆಂಬರ್‌ 24

ವಯೋಮಿತಿ: ಗರಿಷ್ಠ ವಯೋಮಿತಿ ಇರುವುದಿಲ್ಲ.
ಪರೀಕ್ಷಾ ಶುಲ್ಕ ಪಾವತಿಸುವ ವಿಧಾನ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ,3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: ರೂ. 1.000
ಪ್ರವರ್ಗ1,ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ: ರೂ.700

ಪರೀಕ್ಷಾ ವಿಧಾನ:
ಪತ್ರಿಕೆ-1: 50 ಪ್ರಶ್ನೆ(100 ಅಂಕ)
ಪತ್ರಿಕೆ-2:100 ಪ್ರಶ್ನೆ (200 ಅಂಕ)
ಪರೀಕ್ಷೆ ಬರೆಯಲು 3 ಗಂಟೆ ಸಮಯವಿರುತ್ತದೆ.

 

 

 

Tags: