ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) 2024ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದ್ದು, ನವೆಂಬರ್ 24 ರಂದು ಕೆ-ಸೆಟ್ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಅರ್ಹರು ಆನ್‌ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳು http://kea.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
41 ವಿಷಯಗಳಿಗೆ ಕೆ-ಸೆಟ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ರಾಜ್ಯದ ಯಾವುದೇ ಮೂಲದ ವಿಶ್ವವಿದ್ಯಾನಿಲಯದಲ್ಲಿ ಅಥವಾ ಕಾಲೇಜಿನಲ್ಲಿ ಪಿಎಚ್‌ಡಿ ವ್ಯಾಸಂಗ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ. ಜೊತೆಗೆ ರಾಜ್ಯ ಸರ್ಕಾರ ನಡೆಸುವ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ.
ಕೆ-ಸೆಟ್ 2024ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 22
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 26
ಪರೀಕ್ಷೆ ದಿನಾಂಕ: ನವೆಂಬರ್ 24
ವಯೋಮಿತಿ: ಗರಿಷ್ಠ ವಯೋಮಿತಿ ಇರುವುದಿಲ್ಲ.
ಪರೀಕ್ಷಾ ಶುಲ್ಕ ಪಾವತಿಸುವ ವಿಧಾನ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ,3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: ರೂ. 1.000
ಪ್ರವರ್ಗ1,ಎಸ್‌ಸಿ, ಎಸ್‌ಟಿ, ವಿಶೇಷ ಚೇತನರು ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ: ರೂ.700
ಪರೀಕ್ಷಾ ವಿಧಾನ:
ಪತ್ರಿಕೆ-1: 50 ಪ್ರಶ್ನೆ(100 ಅಂಕ)
ಪತ್ರಿಕೆ-2:100 ಪ್ರಶ್ನೆ (200 ಅಂಕ)
ಪರೀಕ್ಷೆ ಬರೆಯಲು 3 ಗಂಟೆ ಸಮಯವಿರುತ್ತದೆ.
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…