ರಾಜ್ಯ

ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿ 2000 ವಿಶೇಷ ಬಸ್‌ ಸಂಚಾರ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದೀಪಾವಳಿ ಹಬ್ಬಕ್ಕೆ ವಿಶೇಷ ಬಸ್‌ಗ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಭಾಗಗಳಿಗೆ 2000 ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ.

ನವೆಂಬರ್‌ 12ರಿಂದ ದೀಪಾವಳಿ ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಯಾಣಿಕರು ಮುಂಗಡ ಬುಕ್ಕಿಂಗ್‌ ಮಾಡಿಕೊಂಡು ಅಥವಾ ನಿಲ್ದಾಣಗಳಲ್ಲಿ ಬಂದು ಟಿಕೆಟ್‌ ಪಡೆದು ಸಂಚಾರ ನಡೆಸಬಹುದು.

ವಿಶೇಷ ಬಸ್‌ ಯಾವಾಗಿನಿಂದ ಆರಂಭ? : ಬೆಂಗಳೂರಿನಿಂದ ವಿವಿಧ ಕಡೆ ಸಂಚರಿಸುವ ಪ್ರಯಾಣಿಕರಿಗೆ ನವೆಂಬರ್‌ 10, 11 ಹಾಗೂ 12 ರಂದು ಮೂರು ದಿನ (ಶುಕ್ರವಾರ, ಶನಿವಾರ ಹಾಗೂ ಭಾನುವಾರ) ವಿಶೇಷ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಿವಿಧ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಿಂದ ವಿಶೇಷ ಬಸ್‌ ಸಂಚರಿಸಲಿವೆ.

ಹಬ್ಬದ ಬಳಿಕ ಹಿಂದಿರುಗುವುದಕ್ಕೂ ವಿಶೇಷ ಬಸ್‌ ಲಭ್ಯ : ಇನ್ನು ಹಬ್ಬ ಮುಗಿದ ಬಳಿಕ ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗಾಗಿ ಜಿಲ್ಲಾ ಕೇಂದ್ರ, ಪ್ರಮುಖ ನಗರ, ಪಟ್ಟಣಗಳಿಂದ ನವೆಂಬರ್‌ 14 ಮತ್ತು 15 ರಂದು ವಿಶೇಷ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಯಾವ ನಿಲ್ದಾಣದಿಂದ ಯಾವ ಊರಿಗೆ ಬಸ್‌?

ಕೆಂಪೇಗೌಡ ಬಸ್ ನಿಲ್ದಾಣ – ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚರಿಸಲಿವೆ.

ಮೈಸೂರು ರಸ್ತೆ ಸ್ಯಾಟ್‌ಲೈಟ್ ಬಸ್ ನಿಲ್ದಾಣ – ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ.
ಶಾಂತಿನಗರ ಬಸ್ ನಿಲ್ದಾಣ – ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ.

ಟಿಕೆಟ್‌ನಲ್ಲಿಯೂ ರಿಯಾಯಿತಿ 

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಟಿಕೆಟ್‌ ಬುಕ್ಕಿಂಗ್‌ ಎಲ್ಲಿ?
ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ಜಿಲ್ಲಾ/ ತಾಲೂಕುಗಳಲ್ಲಿಯೂ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌
ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

andolanait

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

1 hour ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

1 hour ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

2 hours ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

2 hours ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

2 hours ago