ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯಕ್ಕೆ 2500 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಕಲ್ಪಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರ ನಿಲ್ದಾಣದಿಂದ ಅ.17 ರಿಂದ 20 ರವರೆಗೆ ಬಸ್‍ಗಳು ಹೊರಡಲಿವೆ. ಜೊತೆಗೆ ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಅ.22 ರಿಂದ 26 ರವರೆಗೆ ಬೆಂಗಳೂರಿಗೆ ವಿಶೇಷ ಬಸ್‍ಗಳು ಬರಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲ್ಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬದ್ ಮುಂತಾದ ರಸ್ತೆಗಳಿಗೆ ವಿಶೇಷಕ ಕಾರ್ಯಾಚರಣೆ ಮಾಡಲಿವೆ.
ಇದನ್ನು ಓದಿ: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಬಸ್‍ಗಳು ತೆರಳಲಿವೆ.
ತಮಿಳುನಾಡು, ಕೇರಳ, ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್,ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ತೆರಳುವ ಪ್ರತಿಷ್ಠಿತ ಸಾರಿಗೆ ಬಸ್‍ಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿರುವ ಪ್ರಮುಖ ನಗರಗಳಲ್ಲಿ ನಿಗಮದ ಕಚೇರಿಯಲ್ಲಿ ಮುಂಗಡ ಹಾಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳಿದ್ದು, ಇವುಗಳ ಮೂಲಕವು ಸಹ ಮುಂಗಡವಾಗಿ ಹಾಸನಗಳನ್ನು ಕಾಯ್ದಿರಿಸಬಹುದಾಗಿದೆ.
ವಿಶೇಷ ಬಸ್‍ಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ವೆಬ್‍ಸೈಟ್‍ಗಳಲ್ಲಿ ಒದಗಿಸಲಾಗಿದೆ ಎಂದು ನಿಗಮವು ತಿಳಿಸಿದೆ.
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…