ರಾಜ್ಯ

ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯದ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬೆಂಗಳೂರಿನಿಂದ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯಗಳ ಮಹಾನಗರಗಳಿಗೆ ಸಂಚರಿಸುವ ವಿವಿಧ ಮಾರ್ಗಗಳ ಪ್ರತಿಷ್ಠಿತ ಬಸ್‍ಗಳ ದರದಲ್ಲಿ ಭರ್ಜರಿ ರಿಯಾಯಿತಿ ಘೋಷಿಸಿದೆ.

ಸೋಮವಾರದಿಂದಲೇ ಜಾರಿಗೆ ಬರುವಂತೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಲ್ಲಿ ಸಂಚರಿಸುವ ಪ್ರತಿಷ್ಠಿತ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಬಸ್‍ಗಳ ಪ್ರಯಾಣ ದರದಲ್ಲಿ ರಿಯಾಯಿತಿ ಸಿಗಲಿದೆ. ದೂರದ ಸ್ಥಳಕ್ಕೆ ಪ್ರಯಾಣಿಸುವವರಿಗೆ ಈ ನಿರ್ಧಾರದಿಂದ ಹೆಚ್ಚಿನ ಅನುಕೂಲ ಆಗಲಿದೆ.

ಬಹು ಮಾರ್ಗಗಳಲ್ಲಿ ತನ್ನ ಹಲವಾರು ಪ್ರೀಮಿಯಂ ಬಸ್ ಸೇವೆಗಳ ದರವನ್ನು ಶೇ. 5 ರಿಂದ ಶೇ.15 ರಷ್ಟು ಕಡಿಮೆ ಮಾಡಿದೆ.

ಏಪ್ರಿಲ್ ನಿಂದ ಜೂನ್ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ನಂತಹ ಸಮಯದಲ್ಲಿ ಪ್ರಯಾಣಿಕರ ಬೇಡಿಕೆ ಹೆಚ್ಚಿರುತ್ತೆ. ಈ ಸಮಯದಲ್ಲಿ ಕೆಎರ್‍ಟಿಸಿ ಸಾಮಾನ್ಯವಾಗಿ ಪ್ರೀಮಿಯಂ ಸೇವೆಗಳ ದರವನ್ನು 10-15% ರಷ್ಟು ಹೆಚ್ಚಿಸುತ್ತದೆ. ಆದ್ರೆ ಇದೀಗ ಆಫ್ ಸೀಸನ್ ಸಮಯದಲ್ಲಿ ಬಸ್ ಟಿಕೆಟ್ ದರ ಇಳಿಸುವ ಮೂಲಕ, ಪ್ರಯಾಣಿಕರಿಗೆ ಇಲಾಖೆ ಬಿಗ್ ಆಫರ್ ನೀಡುತ್ತಿದೆ.

ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದ್ದು,. ಜನವರಿ.05 ರಿಂದಲೇ ದರ ರಿಯಾಯಿತಿ ಜಾರಿಯಾಗಿದೆ. ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಸಾರಿಗೆ ಬಸ್‌ಗಳ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಆಫರ್ ನೀಡಲಾಗುತ್ತದೆ.

ಬೆಂಗಳೂರಿನಿಂದ ಹೊರಡುವ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ ಮಾರ್ಗಗಳ ಬಸ್‍ಗಳ ಟಿಕೆಟ್ ದರದಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲು ನಿಗಮ ನಿರ್ಧರಿಸಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

26 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

56 mins ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

1 hour ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

1 hour ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago