ಬೆಂಗಳೂರು : ಕೆಎಸ್‌ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್‌ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.
ಕೆಎಸ್‌ಆರ್‌ಟಿಸಿ’ ಎಂದು ಬಳಸಬಾರದು ಎಂದು ಕೇರಳ ರಾಜ್ಯ ಆರ್‌ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ತಿರುವಂಕೂರು ರಾಜ್ಯ ಸಾರಿಗೆ 1937ರಿಂದಲೇ ಇತ್ತು.
ಕೇರಳ ರಾಜ್ಯ ಉದಯವಾದ ಮೇಲೆ 1965ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭವಾಯಿತು. ಕೆಎಸ್‌ಆರ್‌ಟಿಸಿ ಲೋಗೊ ಮಾಡಲಾಗಿದೆ. ಕರ್ನಾಟಕ ರಾಜ್ಯವೂ ಕೆಎಸ್‌ಆರ್‌ಟಿಸಿ ಎಂದೇ ಬಳಸುತ್ತಿದೆ ಎಂದು ಕೇರಳವು ವಿವರಣೆ ನೀಡಿತ್ತು.
ಕರ್ನಾಟಕದ ಲೋಗೊದಲ್ಲಿ ಗಂಡಭೇರುಂಡ ಗುರುತು ಬಳಕೆಗೆ ಕಾಪಿರೈಟ್ ಪಡೆಯಲಾಗಿದೆ. ಕೇರಳದ ಲೋಗೊದಲ್ಲಿ ‘ಆನೆಗಳು’ ಗುರುತು ಆಗಿದ್ದು, ಪ್ರತ್ಯೇಕ ಟ್ರೇಡ್ ಮಾರ್ಕ್ ಆಗಿದೆ ಎಂದು ಕರ್ನಾಟಕ ವಾದ ಮಂಡಿಸಿತ್ತು. ಕೇರಳದ ಅರ್ಜಿಯನ್ನು ವಜಾಗೊಳಿಸುವ ಮೂಲಕ ಕರ್ನಾಟಕದ ವಾದವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…