ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ.
ಮಂಗಳವಾರ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಷ್ಕರಕ್ಕೆ ತಡೆಯಾಜ್ಞೆಯನ್ನು 2 ದಿನಗಳ ಕಾಲ ವಿಸ್ತರಣೆ ಮಾಡಿ ಸಾರಿಗೆ ನೌಕರರ ಸಂಘಟನೆಗಳಿಗೆ ತರಾಟೆ ತೆಗೆದುಕೊಂಡಿತು. ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಎಚ್ಚರಿಸಿತು.
ಹೈಕೋರ್ಟ್ ಆದೇಶ ಬೆನ್ನಲ್ಲೆ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ. ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ. ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಿ ಎಂದು ಹೇಳಿದ್ದಾರೆ.




