Mysore
24
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಕುಮಾರಸ್ವಾಮಿ ರಾಜಕೀಯ ಬದಿಗಿಟ್ಟು ಯುವಜನತೆಗೆ ಉದ್ಯೋಗ ಕೊಡಿಸಲಿ: ಡಿಕೆ ಶಿವಕುಮಾರ್‌

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ವಿಚಾರವಾಗಿ ಗೃಹ ಸಚಿವರೊಂದಿಗೆ ಚರ್ಚಿಸಲು ಬಂದಿದ್ದೆ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳಿಂದ ಮಾಹಿತಿ ಸೋರಿಕೆಯಾಗುತ್ತಿದೆ. ಅಲ್ಲದೆ ನನಗೆ ಉತ್ತಮವಾಗಿ ಗುಪ್ತಚರ ಮಾಹಿತಿ ದೊರಕುತ್ತದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಉಕ್ಕು ಮತ್ತು ಕೈಗಾರಿಕೆ ಎನ್ನುವ ಉತ್ತಮ ಖಾತೆಯನ್ನು ಕುಮಾರಸ್ವಾಮಿಗೆ ನೀಡಿದ್ದಾರೆ. ಇದರಿಂದ ಅವರಿಗೆ ಸಿಕ್ಕಿರುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಳ್ಳಲಿ ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ರಾಜಕಾರಣ ಇದ್ದಿದ್ದೇ, ಯೋಗಕ್ಕಿಂತ ಯೋಗಕ್ಷೇಮ ಪ್ರಮುಖವಾಗಿದೆ. ಬೆಂಗಳೂರು, ಮಂಡ್ಯ, ಬೀದರ್‌, ಕಲಬುರ್ಗಿ ಮತ್ತು ಹಾಸನ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉತ್ತಮ ಕೆಲಸ ಮಾಡಲಿ ಎಂದು ಟೀಕಿಸಿದ್ದಾರೆ.

Tags: