ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ವಿಚಾರವಾಗಿ ಗೃಹ ಸಚಿವರೊಂದಿಗೆ ಚರ್ಚಿಸಲು ಬಂದಿದ್ದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳಿಂದ ಮಾಹಿತಿ ಸೋರಿಕೆಯಾಗುತ್ತಿದೆ. ಅಲ್ಲದೆ ನನಗೆ ಉತ್ತಮವಾಗಿ ಗುಪ್ತಚರ ಮಾಹಿತಿ ದೊರಕುತ್ತದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟದಲ್ಲಿ ಉಕ್ಕು ಮತ್ತು ಕೈಗಾರಿಕೆ ಎನ್ನುವ ಉತ್ತಮ ಖಾತೆಯನ್ನು ಕುಮಾರಸ್ವಾಮಿಗೆ ನೀಡಿದ್ದಾರೆ. ಇದರಿಂದ ಅವರಿಗೆ ಸಿಕ್ಕಿರುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಳ್ಳಲಿ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ರಾಜಕಾರಣ ಇದ್ದಿದ್ದೇ, ಯೋಗಕ್ಕಿಂತ ಯೋಗಕ್ಷೇಮ ಪ್ರಮುಖವಾಗಿದೆ. ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಮತ್ತು ಹಾಸನ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಉತ್ತಮ ಕೆಲಸ ಮಾಡಲಿ ಎಂದು ಟೀಕಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…