ರಾಜ್ಯ

ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲಿ: ಲಕ್ಷ್ಮೀ ಹೆಬ್ಬಾಳಕರ್‌

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಎಫ್‌ಐಆರ್‌ಗೆ ಕಾನೂನು ಮೂಲಕವೇ ಹೋರಾಟ
ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ನಿರ್ಮಲ, ಎಚ್‌ಡಿಕೆ ಮೊದಲು ರಾಜೀನಾಮೆ ನೀಡಲಿ

6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಸಚಿವರು ಕಿಡಿಕಾರಿದರು.

ರಾಜಕೀಯ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವೂ ಕೂಡ ರಾಜಕೀಯ ಮಾಡುತ್ತಿದ್ದು, ಕಿವಿ ಮೇಲೆ ಹೂ ಇಟ್ಟುಕೊಂಡಿಲ್ಲ. ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೇಳಿದರು.

*ಸರ್ಕಾರದ ವಿರುದ್ಧ ಪ್ರಡ್ಯಂತ್ರ
ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಛೇಡಿಸಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

136 ಜನ ಕಾಂಗ್ರೆಸ್ ಶಾಸಕರಿದ್ದು, ಸರ್ಕಾರಕ್ಕೆ ಆಪತ್ತಿಲ್ಲ. ಸಿದ್ದರಾಮಯ್ಯನವರಂಥ ಧೀಮಂತ ನಾಯಕನ ನಾಯಕತ್ವ ನಮ್ಮ ಪಕ್ಷಕ್ಕಿದ್ದು, ಅವರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನದ್ದಾಗಿರುತ್ತದೆ. ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಗರು ಹಗಲುಗನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ಅನುಕರಣೆ
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ ಎಂದು ಸಚಿವರು ಆರೋಪಿಸಿದರು.

ಬೇರೆ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

3 hours ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

3 hours ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

3 hours ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

3 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

3 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

3 hours ago