ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದಿರುವುದನ್ನು ರಾಜ್ಯದ ಪ್ರಮುಖ ಬಿಜೆಪಿ-ಜೆಡಿಎಸ್ ನಾಯಕರು ತೀವ್ರವಾಗಿ ಖಂಡಿಸುತ್ತಿದ್ದಾರೆ.
ನಗರದ ಹೋಟೆಲೊಂದರಲ್ಲಿಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ನಾಯಕರು ಯತೀಂದ್ರ ಬಳಸಿರುವ ಭಾಷೆಯ ಬಗ್ಗೆ ತೀವ್ರ ಆಕ್ಷೇಪಣೆ ಎತ್ತಿದ್ದಾರೆ. ಸಂಸದ ಡಿವಿ ಸದಾನಂದಗೌಡ ಯತೀಂದ್ರರನ್ನು ಖಂಡಿಸಿದ ಬಳಿಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಯತೀಂದ್ರರನ್ನು ಗೂಂಡಾ ಎಂದಿದ್ದಾರೆ. ಕುಮಾರಸ್ವಾಮಿ ಪತ್ರಕರ್ತರೊಂದಿಗೆ ಮಾತನಾಡುವಾಗ ಮಾಧ್ಯಮ ಪ್ರತಿನಿಧಿಯೊಬ್ಬರು ಯತೀಂದ್ರ ಸಿದ್ದರಾಮಯ್ಯ ಅಮಿತ್ ಶಾರನ್ನು ಗೂಂಡಾ ಎಂದು ಕರೆದಿರುವ ಬಗ್ಗೆ ಕೇಳಿದಾಗ ಕುಮಾರಸ್ವಾಮಿ ಆಗಿದ್ರೆ ಯತೀಂದ್ರ ಏನಂತೆ? ಎಂದು ಮಾರ್ಮಿಕವಾಗಿ ಕೇಳಿದರು.
ಇದಕ್ಕೂ ಮೊದಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ತಯಾರಿಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಎರಡೂ ಪಕ್ಷಗಳ ನಾಯಕರು ಜೊತೆಗೂಡಿ ಈಗಾಗಲೇ ಪ್ರಚಾರ ಆರಂಭಿಸಲಾಗಿದೆ. ನಿನ್ನೆ ಮೈಸೂರು ಮತ್ತು ಮಂಡ್ಯದಲ್ಲಿ ವಿಜಯೇಂದ್ರ, ಸಿಎನ್ ಅಶ್ವಥ್ ನಾರಾಯಣ್, ಜಿಟಿ ದೇವೇಗೌಡ, ತಾವು ಮತ್ತು ಇತರ ನಾಯಕರ ನೇತೃತ್ವದಲ್ಲಿ ಎರಡು ಪಕ್ಷಗಳ ಸಭೆ ನಡೆಸಲಾಗಿದೆ. ಬೆಂಗಳೂರಲ್ಲಿ ಆರ್ ಅಶೋಕ್ ಅವರ ಜೊತೆ ಚಿಕ್ಕಪೇಟೆ ಶಾಸಕರ ಮನೆಯಲ್ಲಿ ಸಭೆ ಸೇರಿ ಬೆಂಗಳೂರಿನ 4 ಲೋಕಸಭಾ ಕ್ಷೇತ್ರಗಗಳಲ್ಲಿ ಪ್ರಚಾರದ ರೂಪುರೇಷಗಳನ್ನು ಚರ್ಚಿಸಲಾಗಿದೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…