ಬೆಂಗಳೂರು : ಸಿಲಿಕಾನ್ ಸಿಟಿಯ ಜನರ ಸಮಸ್ಯೆಯನ್ನು ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿ ಶನಿವಾರ ಮತ್ತು ಭಾನುವಾರ ‘ಬೆಂಗಳೂರು ನಡಿಗೆ’ ಕಾರ್ಯಕ್ರಮ ಆಯೋಜಿಸಿ, ನಗರದ ಪ್ರಮುಖ ಪಾರ್ಕ್‌ಗಳಿಗೆ ತೆರಳುತ್ತಿದ್ದಾರೆ.
ಇದನ್ನು ಓದಿ: ಮುನಿರತ್ನ ಗಲಾಟೆ ಮಾಡಲೆಂದೇ ಇಲ್ಲಿಗೆ ಬಂದಿದ್ದರು: ಡಿಸಿಎಂ ಡಿ.ಕೆ.ಶಿವಕುಮಾರ್
ಅದರಂತೆ ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ವೇದಿಕೆ ಮೇಲೆ ಹೈಡ್ರಾಮಾ ನಡೆದಿದೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ನನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು. ಇನ್ನು ಸಿದ್ದರಾಮಯ್ಯ ವಿರುದ್ಧ ಮಾಟ ಮಂತ್ರ ಮಾಡಲಾಗಿದ್ದು, ಡಬ್ಬದಲ್ಲಿ ಹಾಕಿ ವಶೀಕರಣ ಮಾಡಿದ್ದಾರೆ. ಇದಕ್ಕಾಗಿ ಕೋಣ ಬಲಿ ಕೊಟ್ಟಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಂಕಾಗಿದ್ದಾರೆ. ಇನ್ನು ಕುಮಾರಸ್ವಾಮಿ ವಿರುದ್ಧವೂ ಮಾಟ ಮಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…