ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಹೆಚ್‌ಡಿ ಕುಮಾರಸ್ವಾಮಿ ಅವರು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚೆನ್ನೈಗೆ ತೆರಳಿ ಅಲ್ಲಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.
ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆದುಕೊಂಡಿದ್ದರು.





