ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರಿದಿದೆ.
ನಿನ್ನೆ ಬೆಳಿಗ್ಗೆ ಕೂಡ ಗಂಡು ಚೀತಾ ಪವನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇದರೊಂದಿಗೆ ಮಾರ್ಚ್ 2023ರಿಂದ ಸಾವನ್ನಪ್ಪಿದ ಎಂಟನೇ ಆಫ್ರಿಕನ್ ಚಿರತೆಯಾಗಿದೆ.
ರಾಜ್ಯ ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ ನಿನ್ನೆ ಬೆಳಿಗ್ಗೆ ನಮೀಬಿಯಾದ ಗಂಡು ಚಿರತೆ ಯಾವುದೇ ಚಲನವಲನವಿಲ್ಲದೇ ಪೊದೆಗಳ ನಡುವೆ ನಾಲಾ ಅಂಚಿನಲ್ಲಿ ಬಿದ್ದಿರುವುದು ಕಂಡು ಬಂದಿತ್ತು. ಭಾರೀ ಮಳೆಯಿಂದ ನಾಲೆ ತುಂಬಿ ಹರಿಯುತ್ತಿತ್ತು.
ತಕ್ಷಣ ಪಶುವೈದ್ಯರಿಗೆ ಮಾಹಿತಿ ನೀಡಿ ಪರಿಶೀಲಿಸಿದಾಗ ತಲೆ ಸೇರಿದಂತೆ ದೇಹದ ಮುಂಭಾಗದ ಅರ್ಧ ಭಾಗವು ನೀರಿನೊಳಗೆ ಇರುವುದು ಕಂಡುಬಂದಿದೆ. ದೇಹದ ಮೇಲೆ ಎಲ್ಲಿಯೂ ಗಾಯಗಳು ಕಂಡುಬಂದಿಲ್ಲ. ಹೀಗಾಗಿ ಚೀತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…