ರಾಜ್ಯ

ಕುರ್ಜಿ ಕಾದಾಟ | ಜನರಿಗೆ ಸರ್ಕಾರದ ನೆರವು ಮರೀಚಿಕೆ; ಆರ್‌.ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು.

ಮತ್ತೊಂದು ಸ್ವಾತಂತ್ರ್ಯ ಹೋರಾಟ
ಆರ್‌ಎಸ್‌ಎಸ್‌ ಸರಸಂಘಚಾಲಕರಾದ ಮೋಹನ್‌ ಭಾಗವತ್‌ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಮಂದಿರ ನಿರ್ಮಾಣ ಎಂದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್‌, ರಾಹುಲ್‌ ಗಾಂಧಿಗೆ ಹೆದರುವುದಿಲ್ಲ ಎಂದರು.

ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತಿರುವಾಗ ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ವರದಿಯ ಬಗ್ಗೆ ಮಾತಾಡುತ್ತಿದೆ. ಜಾತಿ ಗಣತಿ ವರದಿಯನ್ನು ಬೀದಿಬೀದಿಯಲ್ಲಿ ಜನರು ನೋಡಿದ್ದಾರೆ. ಅದು ಈಗಾಗಲೇ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿರುವ ವರದಿ ಇದಾಗಿದ್ದು, ಯಾವುದೇ ರಹಸ್ಯ ಉಳಿದಿಲ್ಲ. ಎಲ್ಲರೂ ಒಪ್ಪುವಂತೆ ಜಾತಿ ಗಣತಿ ವರದಿ ತಯಾರಿಸಬೇಕು. ಒಕ್ಕಲಿಗರು ಹಾಗೂ ಲಿಂಗಾಯತರ ಸಂಖ್ಯೆ ಜಾಸ್ತಿ ಬರಬಾರದೆಂಬ ಕಾರಣಕ್ಕೆ ಒಡೆದು ಚೂರು ಮಾಡಲಾಗಿದೆ ಎಂದು ದೂರಿದರು.

ಎಲ್ಲ ಯೋಜನೆಗಳಿಗೆ ಕೇಂದ್ರ ಸರ್ಕಾರದ ಜನಗಣತಿ ವರದಿಯನ್ನು ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ನಡೆಸುವ ಜನಗಣತಿ ವರದಿಯಲ್ಲೇ ಎಲ್ಲ ಜಾತಿಗಳ ಲೆಕ್ಕಾಚಾರ ಕೂಡ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ಗಣತಿಗೆ ಸಹಕಾರ ನೀಡಬೇಕು. ಅದು ಬಿಟ್ಟು ಪ್ರತ್ಯೇಕವಾಗಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿ ರಾಜಕೀಯ ಮಾಡಬಾರದು. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಬಲ್‌ ಗೇಮ್‌ ಆಡುತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

16 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

20 mins ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

23 mins ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

3 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

3 hours ago