ಬೆಂಗಳೂರು : ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಸೇರ್ಪಡೆ ಮಾಡಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಸರ್ಕಾರಕ್ಕೆ ವರದಿ ನೀಡಿದೆ.
ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆಗೆ ಮಾಡುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ನೀಡಬೇಕೆಂದು ಸರ್ಕಾರ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಸೂಚನೆ ನೀಡಿತು.
ಇದರನ್ವಯ ರಾಜ್ಯಾದ್ಯಂತ ಕುರುಬ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ, ಮೌಲ್ಯಮಾಪನ, ಆರ್ಥಿಕ ಸ್ಥಿತಿಗತಿ ಸೇರಿದಂತೆ ಹತ್ತು ಹಲವು ಆಯಾಮಗಳಲ್ಲಿ ಅಧ್ಯಯನ ನಡೆಸಿರುವ ಸಂಸ್ಥೆ ಸರ್ಕಾರಕ್ಕೆ ಮುಚ್ಚಿದ ಲಕೋಟಿಯಲ್ಲಿ ವರದಿಯನ್ನು ಸಲ್ಲಿಸಿದೆ.
ವರದಿಯ ಪ್ರಕಾರ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡಲು ಯಾವುದೇ ಅಡ್ಡಿ ಇಲ್ಲ .ಇದರಿಂದ ಆ ಸಮುದಾಯದ ಮೀಸಲಾತಿಗೆ ಯಾವುದೇ ಕಾನೂನಿನ ತೊಡಕಾಗುವುದಿಲ್ಲ ಎಂದು ಹೇಳಿದೆ.
ಇದನ್ನೂ ಓದಿ:-ಮಂಡ್ಯ | ಜಮೀನುಗಳಿಗೆ ನುಗ್ಗಿದ ನೀರು: ಬೆಳೆ ನಷ್ಟದ ಆತಂಕದಲ್ಲಿ ರೈತರು
ಪರಿಶಿಷ್ಟ ಪಂಗಡಕ್ಕೆ ಪ್ರಸ್ತುತ ಶೇ.೭ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ಒಂದು ವೇಳೆ ಈ ಪಟ್ಟಿ ವ್ಯಾಪ್ತಿಗೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಿದರೆ ಮೀಸಲಾತಿ ಪ್ರಮಾಣವನ್ನು ಶೇ.೭ರಿಂದ ೯ಕ್ಕೆ ಹೆಚ್ಚಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವಂತೆಯೂ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಯಾವುದೇ ಸಮುದಾಯವನ್ನು ಇನ್ನೊಂದು ಸಮುದಾಯದ ಜಾತಿಪಟ್ಟಿಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಈ ಹಿಂದೆ ಮೈಸೂರು, ಚಾಮರಾಜನಗರ ಮತ್ತಿತರ ಕಡೆ ವಾಸವಾಗಿರುವ ತಳವಾರ ಮತ್ತು ಪರಿವಾರ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಕೇಂದ್ರ ಸರ್ಕಾರ ಸೇರ್ಪಡೆ ಮಾಡಿತ್ತು.
ಈಗ ಅದರನ್ವಯ ರಾಜ್ಯ ಸರ್ಕಾರವು ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಕ್ರಮ ತೆಗೆದುಕೊಳ್ಳಬಹುದೆಂದು ವರದಿ ಹೇಳಿದೆ.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…