ಬೆಂಗಳೂರು : ಕುರುಬ ಸಮಾಜ ಇತಿಹಾಸ ಸೃಷ್ಟಿಸಿದರು. ಸಾಹಿತ್ಯ, ಆಧ್ಯಾತ್ಮಿಕ, ಸಾಮ್ರಾಜ್ಯ ಸ್ಥಾಪನೆ ಹಾಗೂ ಶೌರ್ಯಕ್ಕೆ ಕುರುಬರು ಹೆಸರಾಗಿದ್ದರೆ, ಸಮಾಜಿಕ ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಹೆಸರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಹಾಲುಮತ ಸಮಾಜ ನಂಬಿಕೆಗೆ ದ್ರೋಹ ಮಾಡದವರು. ಸಿದ್ದರಾಮಯ್ಯ ನವರ ನೇತೃತ್ವದ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆಗೆ ಮುನ್ನ ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಕುರುಬ ಸಮಾಜಕ್ಕೆ 3 ಎಕರೆಜಾಗ ಮೀಸಲು,ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡುವ ಬೇಡಿಕೆ ಬಹಳದಿನದಿಂದ ನೆನೆಗುದಿಗೆ ಬಿದ್ದಿತ್ತು. ಆದರೆ, ಅಡೆತಡೆಗಳನ್ನು ನಿವಾರಿಸಿ ಬೇಡಿಕೆ ಈಡೇರಿಸಲಾಗಿದೆ ಎಂದರು.
ಸುಳ್ಳಿನ ಮಾತುಗಳನ್ನು ನಂಬಬೇಡಿ. ನಿಮ್ಮ ಪರವಾಗಿ ಕೆಲಸ ಮಾಡುವವರನ್ನು, ಅಭಿವೃದ್ದಿ ಕೆಲಸ ಮಾಡುವವರನ್ನು ಬೆಂಬಲಿಸಿ. ದೇಶದಲ್ಲಿ ವಿಚಿತ್ರ ವಾತಾವರಣ ಸೃಷ್ಠಿಯಾಗಿದೆ. ಸಂವಿಧಾನದ ರಕ್ಷಣೆ ಒಂದೆಡೆಯಾದರೆ ಮನುಸ್ಮೃತಿ ಜಾರಿಗೆ ಮತ್ತೊಂದು ಕಡೆ ಪ್ರಯತ್ನ ನಡೆಯುತ್ತಿದೆ. ಆದರೆ ಈ ಷಡ್ಯಂತ್ರದ ವಿರುದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಹೋರಾಟ ನಡೆಸುತ್ತಿದ್ದಾರೆ. ನೀವೆಲ್ಲ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.
ಸಚಿವ ಭೈರತಿ ಸುರೇಶ್ ಮಾತನಾಡಿ, ಶಿಕ್ಷಣದಿಂದಲೇ ಅಭಿವೃದ್ದಿ ಸಾಧ್ಯ.ಕುರುಬರು ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದು ಕರೆ ನೀಡಿದರು.
ವೇದಿಕೆಯ ಮೇಲೆ ಸಿದ್ದರಾಮನಂದ ಮಹಾಸ್ವಾಮಿ, ಮಾಳಿಂಗರಾಯ ಮಹಾರಾಜ, ಹವಾ ಮಲ್ಲಿನಾಐ ಮಹಾರಾಜ, ಎಂ.ಪಿ ರಾಧಾಕೃಷ್ಣ ದೊಡ್ಡ ಮನಿ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಗುರುನಾಥ ಎಸ್ ಪೂಜಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…