Mysore
26
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಅಪಘಾತದಲ್ಲಿ ಕುರುಬೂರು ಶಾಂತಕುಮಾರ್‌ಗೆ ಗಂಭೀರ ಗಾಯ: ಪಂಜಾಬ್‌ನಿಂದ ಬೆಂಗಳೂರಿಗೆ ಏರ್‌ಲಿಫ್ಟ್‌

ಬೆಂಗಳೂರು: ಪಂಜಾಬ್‌ನ ಪಟಿಯಾಲ್‌ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್‌ ಅವರನ್ನು ಪಟಿಯಾಲದ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಆದರೆ ಕುರುಬೂರು ಶಾಂತಕುಮಾರ್‌ ಅವರನ್ನು ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲು ಕೇಂದ್ರ ಸಚಿವ ವಿ.ಸೋಮಣ್ಣ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಪಘಾತದಲ್ಲಿ ಕುರುಬೂರು ಶಾಂತಕುಮಾರ್‌ ಅವರ ಬೆನ್ನುಮೂಳೆಗೆ ತೀವ್ರ ಗಾಯಗಳಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಏರ್‌ಲಿಫ್ಟ್‌ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದಾರೆ. ಈ ಸಂಬಂಧ ಸೋಮಣ್ಣ ಅವರು ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕುರುಬೂರು ಶಾಂತಕುಮಾರ್‌ ಅವರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್‌ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಕುರುಬೂರು ಶಾಂತಕುಮಾರ್‌ ಹಾಗೂ ತಮಿಳುನಾಡಿನ ಪಾಂಡಿಯನ್‌ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

Tags:
error: Content is protected !!