ಬೆಂಗಳೂರು: ಪಂಜಾಬ್‌ನ ಪಟಿಯಾಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡಿರುವ ಕುರುಬೂರು ಶಾಂತಕುಮಾರ್ ಅವರನ್ನು ಪಟಿಯಾಲದ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಆದರೆ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲು ಕೇಂದ್ರ ಸಚಿವ ವಿ.ಸೋಮಣ್ಣ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಅವರ ಬೆನ್ನುಮೂಳೆಗೆ ತೀವ್ರ ಗಾಯಗಳಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಏರ್‌ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದಾರೆ. ಈ ಸಂಬಂಧ ಸೋಮಣ್ಣ ಅವರು ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕುರುಬೂರು ಶಾಂತಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್‌ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡಿನ ಪಾಂಡಿಯನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…