ರಾಜ್ಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆಗೆ ಒತ್ತಾಯಿಸಿದ ಕುರುಬೂರು ಶಾಂತಕುಮಾರ್‌

ಬಳ್ಳಾರಿ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಮುರಿದು ಬಿದ್ದ ಅವಘಡಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ತುಂಗಭದ್ರಾ ಗೇಟ್‌ ಮುರಿದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು. ಇದರ ಜೊತೆಗೆ ನೀರಾವರಿ ಸಚಿವರಾದ ಡಿಕೆಶಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಲಾಶಯದ ಗೇಟ್‌ ಮುರಿದು ನೀರು ಖಾಲಿಯಾಗುತ್ತಿದೆ. ಇದರಿಂದ ರೈತರ ಬದುಕು ಹಸನಾಗುವ ಬದಲು ಹಾಳಾಗುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಗಂಭೀರ ಆರೋಪ ಮಾಡಿದರು.

ಕಳೆದ ಒಂದು ತಿಂಗಳಿನಿಂದಲೂ ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದೆಲ್ಲಾ ಪರಿಸ್ಥಿತಿಗಳನ್ನು ಅವಲೋಕಿಸಿ ರಾಜ್ಯ ಸರ್ಕಾರ ಜಲಾಶಯಗಳ ಭದ್ರತೆ ಹಾಗೂ ಪ್ರವಾಹ ಹಾನಿ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿತ್ತು. ಇದನ್ನು ಬಿಟ್ಟು ಡಿ.ಕೆ.ಶಿವಕುಮಾರ್‌ ಬೇಜಾವಾಬ್ದಾರಿ ವಹಿಸಿದ್ದಾರೆ ಎಂದು ಕಿಡಿಕಾರಿದರು.

ಡಿಕೆಶಿ ಬೇಜಾವಾಬ್ದಾರಿಯಿಂದಲೇ ಈ ಘಟನೆ ನಡೆದಿದೆ. ಆದ್ದರಿಂದ ಸಚಿವ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

3 mins ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

24 mins ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

38 mins ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

1 hour ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

1 hour ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

2 hours ago