ಬೆಂಗಳೂರು: ಕುವೆಂಪು ಕವನದ ಸಾಲು ಓದುತ್ತಾ ಬಜೆಟ್ ಭಾಷಣ ಆರಂಭಿಸಿದರು.
ಕುವೆಂಪು ಕವನದ ಸಾಲು ಓದುತ್ತಾ ಸಿಎಂ ಬಜೆಟ್ ಭಾಷಣ ಶುರು ಮಾಡಿದ್ದಾರೆ. ಕುವೆಂಪು ಅವರು ನುಡಿದಂತೆ ಹೋಗುತಿದೆ ಹಳೆ ಕಾಲ, ಹೊಸ ಕಾಲ ಬರುತಲಿದೆ. ಬರುತಲಿದೆ ಹೊಸ ದೃಷ್ಟಿ, ಹಳೆಯ ಬಾಳು ಹೋಗುತಲಿದೆ, ಹೊಸ ಬಾಳು ಬರುತಿದೆ. ಹೊಸ ದೃಷ್ಟಿಕೋನದೊಂದಿಗೆ ಈ ಬಜೆಟ್ ಮಂಡಿಸುತ್ತಿದ್ದೇನೆ ಎಂದ ಬೊಮ್ಮಾಯಿ.
ಬಜೆಟ್ ಮಂಡನೆ ಆರಂಭಿಸಿದ ಬಸವರಾಜ ಬೊಮ್ಮಾಯಿ
ಕೋವಿಡ್ ನಂತರದ ದಿನಗಳಲ್ಲಿ ಭಾರತ ಆರ್ಥಿಕವಾಗಿ ಪುಟಿದೆದ್ದಿದ್ದು, ಕರ್ನಾಟಕವೂ ಅದೇ ಹಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಪಥದಲ್ಲಿ ಸಾಗುತ್ತಿದ್ದೇವೆ. ಕೋವಿಡ್ ನಂತರದ ದಿನಗಳಲ್ಲಿ ಭಾರತ ಆರ್ಥಿಕವಾಗಿ ಪುಟಿದೆದ್ದಿದ್ದು, ಕರ್ನಾಟಕವೂ ಅದೇ ಹಾದಿಯಲ್ಲಿ ಸಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಪಥದಲ್ಲಿ ಸಾಗುತ್ತಿದ್ದೇವೆ ಎಂದರು.
ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ
ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಗೊಂಡಿದ್ದು ಬಜೆಟ್ ಆರಂಭದಲ್ಲಿಯೇ ಮೋದಿ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಜಿ20 ಶೃಂಗ ಸಭೆ ರಾಜ್ಯದಲ್ಲಿಯೂ ನಡೆದಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ.