ರಾಜ್ಯ

ಕೆಯುಡಬ್ಲ್ಯೂಜೆ ಕ್ರಿಕೆಟ್ ಟೂರ್ನಮೆಂಟ್ ಲೋಗೋ ಅನಾವರಣ ಮಾಡಿದ ಸಿಎಂ

ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ ) ಕ್ರಿಕೆಟ್ ಟೂರ್ನಮೆಂಟ್ ಲೋಗೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಡಿ.5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ  ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೇಟ್ ಕ್ರೀಡಾಕೂಟವನ್ನ ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.
ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ  ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ ಜಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
lokesh

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

9 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

9 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

9 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

10 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

10 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

10 hours ago