ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಭೇಟಿ ಮಾಡಿ, ಅರ್ಜಿ ಸಲ್ಲಿಸಿದ್ದರೂ, ಅರ್ಹ ಪತ್ರಕರ್ತರ ಮಾಸಾಶನ ಮಂಜೂರು ಮಾಡಿಲ್ಲ. 3-4 ತಿಂಗಳಾದರೂ ಮಾಸಾಶನ ಇನ್ನೂ ಸಹ ಬಿಡುಗಡೆ ಆಗಿಲ್ಲ ಎಂಬ ಇತ್ಯಾದಿ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಯಿತು.
ಇದೇ ವೇಳೆ ಜುಲೈ 1 ರಂದು ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಮಾಧ್ಯಮ ಅಕಾಡೆಮಿ, ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಂಟಿಯಾಗಿ ಆಯೋಜನೆ ಮಾಡಿರುವ ಪತ್ರಿಕಾ ದಿನಾಚರಣೆಗೆ ಮುಖ್ಯಮಂತ್ರಿಗಳ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ರಾಜ್ಯ ಸಮಿತಿ ಸದಸ್ಯರಾದ ಎನ್.ರವಿಕುಮಾರ್ ಮತ್ತು ರಾಜ್ಯ ಎಸ್ಸಿ ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…